ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಪೊಲೀಸರಿಂದ ಡಾ.ರತ್ನಾಕರ್ ವಿಚಾರಣೆ

Prasthutha: November 27, 2021

ಮಂಗಳೂರು: ಮಹಿಳಾ ಸಿಬ್ಬಂದಿಗಳೊಂದಿಗೆ ಚೆಲ್ಲಾಟ ನಡೆಸಿದ್ದ ಮಂಗಳೂರಿನ ಆಯುಷ್ಮಾನ್ ನೋಡಲ್ ಅಧಿಕಾರಿ ಡಾಕ್ಟರ್ ರತ್ನಾಕರ್ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಕಾನೂನು ತಜ್ಞರ ಅಭಿಪ್ರಾಯ ಪಡೆದು ರತ್ನಾಕರ್ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು, ಅಗತ್ಯ ಕಾನೂನು ಕ್ರಮಕ್ಕೆ ತನಿಖೆ ಮುಂದುವರಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್, “ರತ್ನಾಕರ್ ನನ್ನು ವಶಕ್ಕೆ ಪಡೆದು ಆತನ ಮೊಬೈಲ್ ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಪೂರಕ ದಾಖಲೆ ಸಂಗ್ರಹ ಮಾಡಿದ್ದೇವೆ. ಎಂಟು ಜನ ಹೆಣ್ಮಕ್ಕಳ ಜೊತೆ ವೈದ್ಯ ಅನುಚಿತ ವರ್ತನೆ ಮಾಡಿರುವುದು ವೀಡಿಯೋ, ಫೋಟೋದಲ್ಲಿ ಕಂಡು ಬಂದಿದೆ. ಸಂತ್ರಸ್ಥ ಯುವತಿಯರು, ಮಹಿಳೆಯರಿಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಿದ್ದೇವೆ. ಸಂತ್ರಸ್ಥರ ಹೇಳಿಕೆ, ತನಿಖೆಯಲ್ಲಿ ಸಿಗುವ ಡಿಜಿಟಲ್, ಡಾಕ್ಯುಮೆಂಟ್ ಸಾಕ್ಷ್ಯ ಆಧರಿಸಿ ಅಗತ್ಯ ಕಾನೂನು ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಮಂಗಳೂರಿನ ಆಯುಷ್ಮಾನ್ ನೋಡಲ್ ಅಧಿಕಾರಿಯಾದ ರತ್ನಾಕರ್ ಮಹಿಳಾ ಸಿಬ್ಬಂದಿಗಳೊಂದಿಗೆ ಚೆಲ್ಲಾಟವಾಡುತ್ತಿರುವ ಫೋಟೋ ಮತ್ತು ವಿಡಿಯೋ ಭಾರೀ ವೈರಲ್ ಆಗಿತ್ತು.
ದ.ಕ ಜಿಲ್ಲೆಯ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ, ಆಯುಷ್ಮಾನ್ ನೋಡಲ್ ಆಫೀಸರ್, ಕಚೇರಿ ಮಹಿಳಾ ಸಿಬ್ಬಂದಿ ಜತೆಗೆ ಅಸಭ್ಯವಾಗಿ ವರ್ತಿಸಿದ್ದರು.

ಇತರ ಸಿಬ್ಬಂದಿಗಳ ಸಮ್ಮುಖದಲ್ಲಿ ಮಹಿಳಾ ಸಿಬ್ಬಂದಿ ಜತೆಗೆ ಈ ಅಧಿಕಾರಿ ಅಸಭ್ಯ ವರ್ತನೆ ಮಾಡಿದ್ದು, ಹಾಡಹಗಲೇ ಕಚೇರಿಯಲ್ಲಿ ಚೆಲ್ಲಾಟವಾಡುತ್ತಿರುವ ದೃಶ್ಯಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿತ್ತು.
ಮಹಿಳಾ ಸಿಬ್ಬಂದಿಗಳ ಜತೆಗೆ ಚೆಲ್ಲಾಟವಾಡುತ್ತಿದ್ದ ಡಾ.ರತ್ನಾಕರ್ ಸಹಕರಿಸದ ಮಹಿಳಾ ಸಿಬ್ಬಂದಿಗಳಿಗೆ ಟಾರ್ಚರ್ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!