Home ಟಾಪ್ ಸುದ್ದಿಗಳು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುರುಘಾ ಮಠದ ಡಾ.ಶಿವಮೂರ್ತಿ ಸ್ವಾಮೀಜಿ ವಶಕ್ಕೆ ?

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುರುಘಾ ಮಠದ ಡಾ.ಶಿವಮೂರ್ತಿ ಸ್ವಾಮೀಜಿ ವಶಕ್ಕೆ ?

ಬೆಂಗಳೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಆದರೆ ಶ್ರೀಗಳು ತನ್ನನ್ನು ಯಾರು ಕೂಡ ವಶಕ್ಕೆ ಪಡೆದಿಲ್ಲ. ಪೊಲೀಸ್ ಭದ್ರತೆಯಲ್ಲಿ ಮಠಕ್ಕೆ ವಾಪಸಾಗುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಧಾರವಾಡ ಮಠಕ್ಕೆ ಬೆಳಗ್ಗಿನ ಜಾವ ಹೋಗಿದ್ದೆ, ಪೊಲೀಸ್ ಭದ್ರತೆಯಲ್ಲಿ ಚಿತ್ರದುರ್ಗ ಮಠಕ್ಕೆ ಹಿಂದಿರುಗುತ್ತಿದ್ದೇನೆ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.

ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಪೊಲೀಸರು ಸ್ವಾಮೀಜಿಯ ಕಾರನ್ನು ಹಿಂಬಾಲಿಸುತ್ತಿದ್ದರು. ಇದನ್ನೇ ಕೆಲವರು ಬಂಧನ ಎಂದು ಬಿಂಬಿಸಿದ್ದಾರೆ ಎಂದು ಮಠದ ಭಕ್ತರು ಆರೋಪಿಸಿದ್ದಾರೆ.

Join Whatsapp
Exit mobile version