Home ಟಾಪ್ ಸುದ್ದಿಗಳು ಡಾ. ಸುಧಾಕರ್ ಸೋತಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಅಂಧಾಭಿಮಾನಿ

ಡಾ. ಸುಧಾಕರ್ ಸೋತಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಅಂಧಾಭಿಮಾನಿ

ಚಿಕ್ಕಬಳ್ಳಾಪುರ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಸೋತಿದಕ್ಕೆ ಅಂಧಾಭಿಮಾನಿಯೊಬ್ಬ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ.


ಚಿತ್ತಾರ ವೆಂಕಟೇಶ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.


ಚಿಕ್ಕಬಳ್ಳಾಪುರ ನಗರದ ಕೋಟೆ ನಿವಾಸಿ ವೆಂಕಟೇಶ ಸುಧಾಕರ್ ಅವರ ಕಟ್ಟಾ ಅಭಿಮಾನಿಯಾಗಿದ್ದ. ಇದೀಗ ಅವರ ಸೋಲಿನಿಂದ ಬೇಸರಗೊಂಡು ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿದ್ದ ಸುಧಾಕರ್ ವಿರುದ್ಧ ಕಾಂಗ್ರೆಸ್ನ ಪ್ರದೀಪ್ ಈಶ್ವರ್ 10,642 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

Join Whatsapp
Exit mobile version