ಪತ್ರಕರ್ತರ 37ನೇ ರಾಜ್ಯ ಸಮ್ಮೇಳನಕ್ಕೆ ಡಾ.ವೀರೇಂದ್ರ ಹೆಗ್ಗಡೆಗೆ ಆಹ್ವಾನ

Prasthutha|

ಮಂಗಳೂರು: ವಿಜಯಪುರದಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 37 ನೇ ರಾಜ್ಯ ಸಮ್ಮೇಳನಕ್ಕೆ  ಧರ್ಮಸ್ಥಳದ ಧರ್ಮಧಿಕಾರಿ , ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಆಹ್ವಾನಿಸಿದರು.

- Advertisement -

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ.ಹೆಗ್ಗಡೆ ಅವರಿಗೆ ಆಮಂತ್ರಣ ನೀಡಲಾಯಿತು. ರಾಜ್ಯಸಭಾ ಸದಸ್ಯರಾಗಿರುವ ಅವರನ್ನು ಇದೇ ವೇಳೆ ಅಭಿನಂದಿಸಲಾಯಿತು.

ಮಂಗಳೂರಿನಲ್ಲಿ ಪತ್ರಕರ್ತರ ಸಮ್ಮೇಳನ ಸಾನಿಧ್ಯ ವಹಿಸಿ ಅಚ್ಚುಕಟ್ಟಾಗಿ ನಡೆಸಿಕೊಟ್ಟ ಸಂದರ್ಭವನ್ನು ನೆನಪಿಸಿ ಅಭಿನಂದನೆಗಳನ್ನು ಸಲ್ಲಿಸಲಾಯಿತು .

- Advertisement -

ಈ ಸಂದರ್ಭ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದ ಡಾ.ಹೆಗ್ಗಡೆ ಅವರು, ಸಮ್ಮೇಳನ  ಅರ್ಥಪೂರ್ಣವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಖಜಾಂಚಿ ಬಿ.ಎನ್.ಪುಷ್ಪರಾಜ್ , ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ಬಿ.ಹರೀಶ್ ರೈ , ರಾಜ್ಯ ಸಮಿತಿ ಸದಸ್ಯ ಕಲ್ಯಾಣ್ ಕುಮಾರ್ , ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಚೈತ್ರೇಶ್ ಇಳಂತಿಲ ಉಪಸ್ಥಿತರಿದ್ದರು.

Join Whatsapp