NDA ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ‌ಮುರ್ಮು

Prasthutha|

ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿ ಎ ಕೂಟದ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಘೋಷಣೆ ಮಾಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

- Advertisement -

ಮುರ್ಮು ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಹಿಂದೆ (2015- 21) ಜಾರ್ಖಂಡ್ ರಾಜ್ಯದ ರಾಜ್ಯಪಾಲೆಯಾಗಿ ಕಾರ್ಯನಿರ್ವಹಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ , ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಿದ ನಾಯಕರು, ಬಳಿಕ ಅಭ್ಯರ್ಥಿ ಘೋಷಿಸಿದ್ದಾರೆ.

Join Whatsapp