ನವದೆಹಲಿ: ಉಪರಾಷ್ಟ್ರಪತಿಯನ್ನು ಸಂಸತ್ತಿನ ಸಂಕೀರ್ಣದಲ್ಲಿ ಅವಮಾನಿಸಿದ ರೀತಿಯನ್ನು ನೋಡಿ ನಾನು ದಿಗ್ಭ್ರಮೆಗೊಂಡಿದ್ದೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನ್ಕರ್ ಗೆ ವಿಪಕ್ಷಗಳ ನಾಯಕರಿಂದ ಅವಮಾನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಚುನಾಯಿತ ಪ್ರತಿನಿಧಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಮುಕ್ತವಾಗಿರಬೇಕು. ಅವರ ಅಭಿವ್ಯಕ್ತಿ ಘನತೆ ಮತ್ತು ಸೌಜನ್ಯದ ಮಾನದಂಡಗಳಾಗಿರಬೇಕು ಎಂದರು.