ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ

Prasthutha|

ನವದೆಹಲಿ: ಭಾರತದ ’15ನೇ ರಾಷ್ಟ್ರಪತಿ’ಯಾಗಿ ದ್ರೌಪದಿ ಮುರ್ಮು ಇಂದು (ಸೋಮವಾರ) ಪ್ರಮಾಣವಚನ ಸ್ವೀಕರಿಸಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ದ್ರೌಪದಿ ಮುರ್ಮು ಅವರಿಗೆ ಪ್ರಮಾಣವಚನ ಬೋಧಿಸಿದರು.

- Advertisement -


ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಬೆಳಗ್ಗೆ 10-35ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ರಾಷ್ಟ್ರಪತಿಯಾಗಿ ಅಧಿಕಾರವಹಿಸಿಕೊಳ್ಳುವ ಮೊದಲು ಮುರ್ಮು ಅವರು ರಾಜ್ ಘಾಟ್ ಗೆ ಭೇಟಿ ನೀಡಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದರು.


ಬುಡಕಟ್ಟು ಸಮುದಾಯದ ಮಹಿಳೆಯಾಗಿರುವ ದ್ರೌಪದಿ ಮುರ್ಮು ಅವರು ಪ್ರತಿಭಾ ಪಾಟೀಲ್ ಬಳಿಕ ರಾಷ್ಟ್ರಪತಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ದೇಶದ ಎರಡನೇ ಮಹಿಳೆ ಆಗಿದ್ದಾರೆ. ಇದಲ್ಲದೇ, 1947 ರ ಬಳಿಕ ಜನಿಸಿದವರಲ್ಲಿ ರಾಷ್ಟಪತಿಯಾದ ಮೊದಲಿಗರಾಗಿದ್ದಾರೆ.

- Advertisement -


ಸಂಸತ್ತಿನಲ್ಲಿ ಹಮ್ಮಿಕೊಂಡಿದ್ದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಿದ್ದರು. ಎನ್ ಡಿಎ ಅಭ್ಯರ್ಥಿಯಾಗಿದ್ದ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರ ವಿರುದ್ಧ ಶೇ.65 ಕ್ಕೂ ಅಧಿಕ ಮತ ಪಡೆದು ಗೆಲುವು ಸಾಧಿಸಿದ್ದರು.



Join Whatsapp