ಚಿಕ್ಕಮಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಕೊಪ್ಪ ಡಿಎಫ್ ಒ ನಂದೀಶ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಡಿಆರ್ಎಫ್ಒ ಅವರನ್ನು ದರ್ಶನ್ ಅಮಾನತು ಮಾಡಲಾಗಿದೆ. ಅರಣ್ಯ ಇಲಾಖೆಯ ಕಳಸ ಉಪ ವಲಯ ಅರಣ್ಯಾಧಿಕಾರಿ (DRFO) ದರ್ಶನ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ತನಿಖೆ ನಡೆಸಿ, ಕ್ರಮಕೈಗೊಳ್ಳಿ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಅರೆನೂರು ಗ್ರಾಮದ ಸುಪ್ರೀತ್ ಮತ್ತು ಅಬ್ದುಲ್ ಅವರು ಚಿಕ್ಕಮಗಳೂರು ಜಿಲ್ಲೆ ಆಲ್ದೂರು ವಲಯ ಅರಣ್ಯಾಧಿಕಾರಿಗೆ ಲಿಖಿತ ದೂರು ನೀಡಿದ್ದರು.