ಮದ್ಯ ಸೇವಿಸುವವನು ಭಾರತೀಯನಲ್ಲ: ಮುಖ್ಯಮಂತ್ರಿ ನಿತೀಶ್ ಕುಮಾರ್

Prasthutha|

ಪಾಟ್ನಾ: ಬಿಹಾರದಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಳ್ಳಭಟ್ಟಿ ಸಾರಾಯಿಗಳ ದುರಂತಗಳ ಬಗ್ಗೆ ಟೀಕೆಗಳನ್ನು ಎದುರಿಸುತ್ತಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ , ಮದ್ಯ ಸೇವಿಸುವ ಜನರನ್ನು ಭಾರತೀಯರೆಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದ್ದಾರೆ

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾತ್ಮಾ ಗಾಂಧಿ ಕೂಡ ಮದ್ಯ ಸೇವನೆಯನ್ನು ವಿರೋಧಿಸಿದ್ದರು ಮತ್ತು ಅವರ ತತ್ವಗಳಿಗೆ ವಿರುದ್ಧವಾಗಿ ನಡೆಯುವವರು ಮಹಾಪಾಪಿಗಳು. ಅಂತವರನ್ನು ಭಾರತೀಯರೆಂದು ಪರಿಗಣಿಸಲಾಗುವುದಿಲ್ಲ. ಮದ್ಯಪಾನ ಸೇವನೆ ಆರೋಗ್ಯಕ್ಕೆ ಹಾನಿಕರ ಎಂದು ತಿಳಿದಿದ್ದರೂ ಜನರು ಸೇವಿಸುತ್ತಾರೆ. ಹೀಗಾಗಿ ಅದರ ಪರಿಣಾಮಗಳಿಗೆ ಅವರೇ ಹೊಣೆ ಹೊರತು ರಾಜ್ಯ ಸರ್ಕಾರ ಹೊಣೆಯಲ್ಲ. ಮದ್ಯಪಾನ ಸೇವಿಸಿ ಮೃತಪಡುವ ಜನರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಹೇಳಿದರು.

Join Whatsapp