ಚೊಕ್ಕಬೆಟ್ಟು 5ನೇ ವಾರ್ಡ್ ಸುತ್ತಮುತ್ತ ಕುಡಿಯುವ ನೀರಿನ ಸಮಸ್ಯೆ| ಪರಿಹಾರಕ್ಕಾಗಿ ಅಹೋರಾತ್ರಿ ಶ್ರಮಿಸುತ್ತಿರುವ ಎಸ್‌ಡಿಪಿಐ ಕಾರ್ಯಕರ್ತರು

Prasthutha|

ಮಂಗಳೂರು: ನಗರದ ಹೊರವಲಯದ ಚೊಕ್ಕಬೆಟ್ಟು 5ನೇ ವಾರ್ಡ್ ಸುತ್ತಮುತ್ತ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಈ ಪ್ರದೇಶಗಳಲ್ಲಿ ನೀರಿನ ವ್ಯವಸ್ಥೆ ಸ್ಥಗಿತಗೊಂಡಿದೆ. ಗ್ರಾಮದಲ್ಲಿ ಕೊಳವೆಬಾವಿಗಳಿದ್ದರೂ ಅವುಗಳಲ್ಲಿ ನೀರು ಬರುತ್ತಿಲ್ಲ. ಜನ ನೀರಿಗಾಗಿ ತೀವ್ರ ಪರದಾಟ ನಡೆಸುತ್ತಿದ್ದಾರೆ.

- Advertisement -

ದೈನಂದಿನ ಕೆಲಸ ಬಿಟ್ಟು ನೀರಿಗಾಗಿ ಅಲೆದಾಡುತ್ತಿರುವ ಪ್ರದೇಶದ ಜನರ ಸಮಸ್ಯೆಯ ಪರಿಹಾರಕ್ಕಾಗಿ ಎಸ್ಡಿಪಿಐ ಕಾರ್ಯಕರ್ತರು ಅಹೋರಾತ್ರಿ ಓಡಾಟ ನಡೆಸುತ್ತಿರುವುದು ಕಂಡುಬರುತ್ತಿದೆ.

ಏಪ್ರಿಲ್ ತಿಂಗಳಿನಲ್ಲಿ ಬೇಸಿಗೆ ಪ್ರಮಾಣ ಹೆಚ್ಚಿದ್ದು, ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಾಗಲಿರುವುದರಿಂದ ಪ್ರದೇಶದ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಕುಡಿಯುವ ನೀರು ಪೂರೈಕೆಯಲ್ಲಿ ನಿರಂತರ ವ್ಯತ್ಯಯ ಉಂಟಾಗಿರುವುದನ್ನು ಮನಗಂಡ ಎಸ್‌ಡಿಪಿಐ ಕಾರ್ಯಕರ್ತರು ನಿರಂತರವಾಗಿ ಪರಿಹಾರಕ್ಕಾಗಿ ಪ್ರಯತ್ನಿಸುತ್ತಿದ್ದಾರೆ.



Join Whatsapp