ಮಂಗಳೂರು : ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಆತ್ಮಹತ್ಯೆ

Prasthutha|

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಘಟನೆ ನಡೆದಿದೆ.

- Advertisement -

ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿಯ ನಿವಾಸಿ ಬಾಲಕೃಷ್ಣ (58) ಎಂಬವರು ಆತ್ಮಹತ್ಯೆಗೈದ ಚಾಲಕ. ಬಾಲಕೃಷ್ಣ ಗುರುವಾರ(ಜೂ.8) ತಮ್ಮ ಮನೆ ರಾಘವೇಂದ್ರ ನಿಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸಿದ್ದರು.

- Advertisement -

ಮೃತರ ಪುತ್ರ ಚೇತನ್‌ ನೀಡಿದ ದೂರಿನಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.