ನಿಲ್ಲಿಸದ ಚಾಲಕ: ಬಸ್’ಗೆ ಕಲ್ಲೆಸೆದ ಮಹಿಳೆಗೆ 5 ಸಾವಿರ ದಂಡ

Prasthutha|

ಕೊಪ್ಪಳ: ಬಸ್ ನಿಲ್ಲಿಸದ ಕಾರಣ ಸಿಟ್ಟಿಗೆದ್ದು ಮಹಿಳೆಯೊಬ್ಬರು ಸರ್ಕಾರಿ ಬಸ್ ಗೆ ಕಲ್ಲು ಎಸೆದ ಘಟನೆ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಬಳಿ ಭಾನುವಾರ ನಡೆದಿದ್ದು, ಮಹಿಳೆಗೆ ದಂಡ ವಿಧಿಸಲಾಗಿದೆ.

- Advertisement -


ಬಸ್ನ ಚಾಲಕ ಕಂ ನಿರ್ವಾಹಕ ಮುಕ್ಕಣ್ಣ ಕುಕನೂರು ಅವರು ಕಲ್ಲು ಎಸೆದ ಮಹಿಳೆಯನ್ನು ಎಲ್ಲ ಪ್ರಯಾಣಿಕರ ಸಮೇತ ಬಸ್ ಅನ್ನು ಮುನಿರಾಬಾದ್ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿ ಮಹಿಳೆಯಿಂದ ₹5 ಸಾವಿರ ದಂಡ ಕಟ್ಟಿಸಿಕೊಂಡು ವಾಪಸ್ ಕಳುಹಿಸಿದ್ದಾರೆ.

ಇಳಕಲ್ ಬಳಿಯ ಪಾಪನಳ್ಳಿ ನಿವಾಸಿ ಲಕ್ಷ್ಮಿ ಎಂಬವರು ಹುಲಿಗಿಯ ಹುಲಿಗೆಮ್ಮ ದೇವಿ ದರ್ಶನ ಪಡೆಯಲು ಬಂದಿದ್ದರು. ಆದರೆ ಹುಲಿಗೆ ಕ್ರಾಸ್ ಬಳಿ ಬಹಳಷ್ಟು ಹೊತ್ತಿನಿಂದ ಕಾದರೂ ಬಸ್ ನಿಲ್ಲಿಸಿರಲಿಲ್ಲ. ಇದರಿಂದ ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗದ ವೇಗದೂತ ಬಸ್ ಕೊಪ್ಪಳದಿಂದ-ಹೊಸಪೇಟೆಗೆ ಹೊರಟ ಬಸ್ ಗೆ ಕಲ್ಲು ಎಸೆದಿದ್ದರು.

Join Whatsapp