ಚಾಲಕನಿಗೆ ಹೃದಯಾಘಾತ; ಬಸ್ ಪಲ್ಟಿಯಾಗಿ ಹಲವರಿಗೆ ಗಾಯ

Prasthutha|

ರಾಯಚೂರು: ಬಸ್ ಚಾಲಕನಿಗೆ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದು, ನಿಯಂತ್ರಣ ಕಳೆದುಕೊಂಡ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಜಿಲ್ಲೆಯ ಚಿಕ್ಕಹೆಸರೂರು ಗ್ರಾಮದ ಬಳಿ ನಡೆದಿದೆ.

- Advertisement -


ಶ್ರೀನಿವಾಸ್ ನಾರಾಯಣ ಗೌಡ (52) ಮೃತಪಟ್ಟ ಬಸ್ ಚಾಲಕ. ರಾಯಚೂರು-ಲಿಂಗಸುಗೂರು ರಸ್ತೆಯಲ್ಲಿ ಬೆಳಗಾವಿಗೆ ಸಂಚರಿಸುತ್ತಿದ್ದ ವೇಳೆ ಮಾರ್ಗಮಧ್ಯದಲ್ಲಿ ಚಾಲಕನಿಗೆ ಹೃದಯಾಘಾತವಾಗಿದೆ. ಚಾಲಕ ಅಸ್ವಸ್ಥಗೊಂಡ ಕಾರಣ ನಿಯಂತ್ರಣವಿಲ್ಲದ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ನಿರ್ವಾಹಕ ಸೇರಿದಂತೆ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು, ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಲಾಗಿದೆ.


ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp