ಛತ್ರಿ ಹಿಡಿದು ಬಸ್ ಚಾಲನೆ: ಚಾಲಕ ಮತ್ತು ನಿರ್ವಾಹಕ ಅಮಾನತು

Prasthutha|

ಧಾರವಾಡ: ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಸ್ಟೀರಿಂಗ್‌ ಹಿಡಿದು ಬಸ್‌ ಚಲಾಯಿಸಿದ ಚಾಲಕ ಮತ್ತು ಬಸ್ಸಿನ ನಿರ್ವಾಹಕರನ್ನು ಅಮಾನತು ಮಾಡಲಾಗಿದೆ.

- Advertisement -

ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಸ್ಟೀರಿಂಗ್‌ ಹಿಡಿದು ಬಸ್‌ ಚಲಾಯಿಸಿದ ಮೊಬೈಲ್‌ನಲ್ಲಿ ವಿಡಿಯೊ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಯವ್ಯ ಕರ್ನಾಟಕ ಸಾರಿಗೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಚಾಲಕ ಹನುಮಂತಪ್ಪ ಅ.ಕಿಲ್ಲೇದಾರ ಮತ್ತು ನಿರ್ವಾಹಕಿ ಅನಿತಾ ಎಚ್‌.ಬಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಎನ್‌ಡಬ್ಲ್ಯುಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ ತಿಳಿಸಿದ್ದಾರೆ.

ಬಸ್​​ನಲ್ಲಿ ಮಳೆ ನೀರು ಸೋರುತ್ತಿರಲಿಲ್ಲ. ಬಸ್ ನಲ್ಲಿ ಪ್ರಯಾಣಿಕರು ಯಾರು ಇಲ್ಲದ ವೇಳೆಯಲ್ಲಿ ಕಂಡಕ್ಟರ್ ಅನಿತಾ ಹೆಚ್ ಬಳಿಯಿದ್ದ ಛತ್ರಿ ತೆಗೆದುಕೊಂಡು ಮನರಂಜನೆಗಾಗಿ ವಿಡಿಯೋ ಮಾಡಿದ್ದಾರೆ. ಮಳೆ ನೀರು ಸೋರಿಕೆ ಬಗ್ಗೆ ಪ್ರಯಾಣಿಕರಿಂದ ಯಾವುದೇ ದೂರು ಬಂದಿಲ್ಲ ಎಂದು NWKRTC ಅಧಿಕಾರಿಗಳು ತಪಾಸಣೆ ನಡೆಸಿ ವರದಿ ಸಲ್ಲಿಸಿದ್ದರು.

Join Whatsapp