ಸೌದಿ ಅರೇಬಿಯಾ | ಕಿಂಗ್ ಅಬ್ದುಲ್ಲಾ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿ

Prasthutha|

ಜಿಝಾನ್: ಸೌದಿ ಅರೇಬಿಯಾದ ದಕ್ಷಿಣ ನಗರದ ಜಿಝಾನ್ ನ ಕಿಂಗ್ ಅಬ್ದುಲ್ಲಾ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಡ್ರೋನ್ ದಾಳಿ ನಡೆದಿದ್ದು, 10 ಜನರು ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -


ಸೌದಿ ಅರೇಬಿಯಾದ ಜಿಝಾನ್ ನ ಕಿಂಗ್ ಅಬ್ದುಲ್ಲಾ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ ಸ್ಫೋಟಕಗಳು ತುಂಬಿದ ಡ್ರೋನ್ ದಾಳಿ ನಡೆದಿದ್ದು, ಘಟನೆಯಲ್ಲಿ 10 ಜನರಿಗೆ ತೀವ್ರ ಗಾಯವಾಗಿದೆ ಎಂದು ವರದಿಯಾಗಿದೆ. ಗಾಯಗೊಂಡವರಲ್ಲಿ 6 ಸೌದಿ ಪ್ರಜೆಗಳು ಸೇರಿದಂತೆ ಮೂವರು ಬಾಂಗ್ಲಾದೇಶಿ ಮತ್ತು ಓರ್ವ ಸುಡಾನ್ ಪ್ರಜೆ ಸೇರಿದ್ದಾರೆ ಎನ್ನಲಾಗಿದೆ. ಡ್ರೋನ್ ದಾಳಿಯ ವೇಳೆ ವಿಮಾನ ನಿಲ್ದಾಣದ ಕೆಲವು ಮುಂಭಾಗದ ಕಿಟಕಿಗಳು ಛಿದ್ರಗೊಂಡಿವೆ ಎಂದು ಸೌದಿ ನೇತೃತ್ವದ ಒಕ್ಕೂಟದ ವಕ್ತಾರರು ಮಾಹಿತಿ ನೀಡಿದ್ದಾರೆ.

ದಾಳಿ ನಡೆಸಿದ ಗುಂಪು ನಿಯಮಿತವಾಗಿ ಗಲ್ಫ್ ಸಾಮ್ರಾಜ್ಯವನ್ನು ಗುರಿಯಾಗಿಸಿಕೊಂಡು ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸುತ್ತಿದೆ ಎಂದು ವಕ್ತಾರರು ತಿಳಿಸಿದ್ದಾರೆ.

Join Whatsapp