ಪಠ್ಯದಲ್ಲಿ ನನ್ನ ಕವಿತೆ ಕೈಬಿಡಿ: ಸಚಿವ ಬಿ.ಸಿ ನಾಗೇಶ್ ಗೆ ಪತ್ರ ಬರೆದ ಚಿನ್ನಸ್ವಾಮಿ

Prasthutha|

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಬೆನ್ನಲ್ಲೆ ಮೂಡ್ನಾಕೂಡು ಚಿನ್ನಸ್ವಾಮಿಯವರು ತಮ್ಮ ಪಠ್ಯವನ್ನು ಕೈಬಿಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆದಿದ್ದಾರೆ.
ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿಯನ್ನು ನೇಮಿಸಿ ಶಾಲಾ ಪಠ್ಯಗಳನ್ನು ಕೇಸರೀಕರಣಗೊಳಿಸುತ್ತಿರುವ ಬಗ್ಗೆ ಕನ್ನಡ ಸಾರಸ್ವತ ಲೋಕ ವಿಚಲಿತಗೊಂಡಿದೆ. ಬಸವಣ್ಣನವರ ಕುರಿತು ತಪ್ಪು ಮಾಹಿತಿ ನೀಡುವುದು, ಮಹಾನ್ ದಾರ್ಶನಿಕಕವಿ ಕುವೆಂಪು ಅವರನ್ನು ಅವಮಾನಿಸುವುದು ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಮಾಡುವ ಅಪಚಾರ ಜಾತಿ ವ್ಯವಸ್ಥೆಯಿಂದ ಕಲುಷಿತಗೊಂಡಿರುವ ನಮ್ಮ ಸಮಾಜವನ್ನು ಜಾತ್ಯತೀತತೆಯಿಂದ ಸರಿಪಡಿಸಲು ಸಾಧ್ಯ. ಸ್ವಸ್ಥ ಸಮಾಜಕ್ಕಾಗಿ ಮುಂದಿನ ಪೀಳಿಗೆಯನ್ನು ತಯಾರು ಮಾಡುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಕ್ಷೇತ್ರ ಅನವಶ್ಯಕ ವಿದ್ಯಮಾನಗಳಿಂದ ದಾಳಿಗೊಳಗಾಗಿರುವುದು ವಿಷಾದನೀಯ ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.

Join Whatsapp