ರಾಷ್ಟ್ರಪತಿ ಚುನಾವಣೆ: ನಾಮಪತ್ರ ಸಲ್ಲಿಸಿದ NDA ಅಭ್ಯರ್ಥಿ ದ್ರೌಪದಿ ಮುರ್ಮು

Prasthutha|

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ NDA ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ಹಲವಾರು ಗಣ್ಯರ ಸಮ್ಮುಖದಲ್ಲಿ ಇಂದು ನಾಮಪತ್ರ ಸಲ್ಲಿಸಿದರು.

- Advertisement -

ಈ ವೇಳೆ ಪ್ರಧಾನಿ ಮೋದಿ, ಕೇಂದ್ರ ಸಚಿವ ಸಂಪುಟದ ಸಚಿವರು, ಬಿಜೆಪಿ ಮತ್ತು NDA ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಸುವ ಮೊದಲು ಮುರ್ಮು ಅವರು ಮಹಾತ್ಮ ಗಾಂಧಿ, ಬಿ.ಆರ್. ಅಂಬೇಡ್ಕರ್ ಮತ್ತು ಬಿರ್ಸಾ ಮುಂಡಾ ಅವರ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದರು.

- Advertisement -

ಮುರ್ಮು ಅವರು ರಾಷ್ಟ್ರಪತಿಯಾಗಿ ಚುನಾಯಿತರಾದರೆ ಮೊದಲ ಬುಡಕಟ್ಟು ಮತ್ತು ಎರಡನೇ ಮಹಿಳಾ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

Join Whatsapp