ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್.ಫಾರ್ಮ್ ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ತೆಲುಗು ನಟಿ ಹೇಮಾ ಸಹಿತ 8 ಮಂದಿಯೂ ವಿಚಾರಣೆಗೆ ಸೋಮವಾರ ಗೈರಾಗಿದ್ದಾರೆ.
ಪಾರ್ಟಿಯಲ್ಲಿ ನಟಿ ಹೇಮಾ ಸಹಿತ 88 ಮಂದಿ ಡ್ರಗ್ಸ್ ಸೇವಿಸಿರುವುದು ಖಚಿತವಾದ ಹಿನ್ನೆಲೆಯಲ್ಲಿ ಮೊದಲ ಹಂತವಾಗಿ 8 ಮಂದಿಗೆ ನೋಟಿಸ್ ಜಾರಿಗೊಳಿಸಿ ಮೇ 27ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಹೇಮಾ ಆರೋಗ್ಯ ಸಮಸ್ಯೆ ನೆಪವೊಡ್ಡಿ ಒಂದು ವಾರ ಕಾಲಾವಕಾಶ ನೀಡುವಂತೆ ತನಿಖಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಇತರರು ಯಾವುದೇ ಪ್ರತಿ ಕ್ರಿಯೆ ನೀಡಿಲ್ಲ. ಉಳಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಿಸಿಬಿ ತಿಳಿಸಿದೆ.
ಈ ಮಧ್ಯೆ ನಟಿ ಹೇಮಾ ವಿಚಾರಣೆಗೆ ಹಾಜರಾಗಲು ಒಂದು ವಾರಗಳ ಕಾಲಾವಕಾಶ ಕೇಳಿದ್ದಾರೆ.