Home ಟಾಪ್ ಸುದ್ದಿಗಳು ಡ್ರಗ್ಸ್ ಜಾಲ: ಇಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದ ರಕುಲ್ ಪ್ರೀತ್ ಸಿಂಗ್

ಡ್ರಗ್ಸ್ ಜಾಲ: ಇಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದ ರಕುಲ್ ಪ್ರೀತ್ ಸಿಂಗ್

ಹೈದರಾಬಾದ್‌: ಮಾದಕ ವಸ್ತುಗಳ ಜಾಲದ ಪ್ರಕರಣದ ಅಕ್ರಮ ಹಣ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ನಟಿ ರಕುಲ್‌ ಪ್ರೀತ್ ಸಿಂಗ್‌  ಇಂದು  ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದರು.

ನಾಲ್ಕು ವರ್ಷಗಳ ಹಿಂದಿನ ಮಾದಕ ವಸ್ತುಗಳ ಜಾಲದ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡ್ರಗ್ಸ್ ಸೇವನೆ, ಸರಬರಾಜು ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ನಟಿ ರಕುಲ್ ಪ್ರೀತ್ ಸಿಂಗ್ ಸೇರಿ ತೆಲುಗು ಚಿತ್ರೋದ್ಯಮದ ಹತ್ತು ಮಂದಿ ನಟ ನಟಿಯರಿಗೆ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿ ಮಾಡಿತ್ತು.

ತೆಲಂಗಾಣ ಸರ್ಕಾರದ ಅಬಕಾರಿ ಇಲಾಖೆ ನಿಷೇಧಿಸಿರುವ ಎಲ್‌ ಎಸ್‌ ಡಿ ಮತ್ತು ಎಂಡಿಎಂನಂತಹ ಅತ್ಯಾಧುನಿಕ ಮಾದಕ ದ್ರವ್ಯಗಳನ್ನು ಪೂರೈಸಿದ ವಿಚಾರಕ್ಕೆ ಸಂಬಂಧಿಸಿದಂತೆ ತೆಲುಗು ನಟ -ನಟಿಯರಿಗೆ ನೋಟಿಸ್ ಜಾರಿ ಮಾಡಲಾಗಿತ್ತು.

ಈ ಪ್ರಕರಣದಲ್ಲಿ ಈಗಾಗಲೇ ತೆಲುಗು ಸಿನಿಮಾದ ನಿರ್ದೇಶಕ ಪುರಿ ಜಗನ್ನಾಥ್ ಮತ್ತು ನಟಿ ಚಾರ್ಮಿ ಕೌರ್ ಅವರನ್ನು ವಿಚಾರಣೆಗೆ ಒಳಪಡಿಸಿರುವ ಅಧಿಕಾರಿಗಳು ಮಾಹಿತಿಯನ್ನು ಸಂಗ್ರಹಿಸಿದ್ದಾರೆ.

Join Whatsapp
Exit mobile version