ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಸೇರಿ ಮೂವರಿಗೆ ಜಾಮೀನು ನೀಡಲು ನಿರಾಕರಿಸಿದ ನ್ಯಾಯಾಲಯ

Prasthutha|

ಮುಂಬೈ: ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಅವರಿಗೆ ಡ್ರಗ್ಸ್ ಪ್ರಕರಣದಲ್ಲಿ ಜಾಮೀನು ನಿರಾಕರಿಸಲಾಗಿದೆ.
ಮುಂಬೈ ಸೆಷನ್ಸ್ ಕೋರ್ಟ್ ಆರ್ಯನ್ ಮತ್ತು ಇತರ ಮೂವರಿಗೆ ಬುಧವಾರ ಜಾಮೀನು ನೀಡಲು ನಿರಾಕರಿಸಿತು.

- Advertisement -

ಆರ್ಯನ್ ಖಾನ್, ಅರ್ಬಾಝ್ ಮರ್ಚಂಟ್ ಮತ್ತು ಮುನ್ ಮುನ್ ಧಮೇಚಾ ಅವರ ಜಾಮೀನು ಅರ್ಜಿಯನ್ನು ನ್ಯಾಯಾಧೀಶರು ತಳ್ಳಿಹಾಕಿದರು.

ಈ ಹಿಂದೆ ಮುಂಬೈ ನ್ಯಾಯಾಲಯವು ಆರ್ಯನ್ ಖಾನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಖಾನ್ ಅವರ ಪೊಲೀಸ್ ಕಸ್ಟಡಿಯನ್ನು ವಿಸ್ತರಿಸುವಂತೆ ಕೋರಿ ಮಾದಕವಸ್ತುಗಳ ನಿಯಂತ್ರಣ ಕಾಯಿದೆ (ಎನ್ಸಿಬಿ) ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.

Join Whatsapp