Home ಟಾಪ್ ಸುದ್ದಿಗಳು ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಸೇರಿ ಮೂವರಿಗೆ ಜಾಮೀನು ನೀಡಲು ನಿರಾಕರಿಸಿದ ನ್ಯಾಯಾಲಯ

ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಸೇರಿ ಮೂವರಿಗೆ ಜಾಮೀನು ನೀಡಲು ನಿರಾಕರಿಸಿದ ನ್ಯಾಯಾಲಯ

ಮುಂಬೈ: ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಅವರಿಗೆ ಡ್ರಗ್ಸ್ ಪ್ರಕರಣದಲ್ಲಿ ಜಾಮೀನು ನಿರಾಕರಿಸಲಾಗಿದೆ.
ಮುಂಬೈ ಸೆಷನ್ಸ್ ಕೋರ್ಟ್ ಆರ್ಯನ್ ಮತ್ತು ಇತರ ಮೂವರಿಗೆ ಬುಧವಾರ ಜಾಮೀನು ನೀಡಲು ನಿರಾಕರಿಸಿತು.

ಆರ್ಯನ್ ಖಾನ್, ಅರ್ಬಾಝ್ ಮರ್ಚಂಟ್ ಮತ್ತು ಮುನ್ ಮುನ್ ಧಮೇಚಾ ಅವರ ಜಾಮೀನು ಅರ್ಜಿಯನ್ನು ನ್ಯಾಯಾಧೀಶರು ತಳ್ಳಿಹಾಕಿದರು.

ಈ ಹಿಂದೆ ಮುಂಬೈ ನ್ಯಾಯಾಲಯವು ಆರ್ಯನ್ ಖಾನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಖಾನ್ ಅವರ ಪೊಲೀಸ್ ಕಸ್ಟಡಿಯನ್ನು ವಿಸ್ತರಿಸುವಂತೆ ಕೋರಿ ಮಾದಕವಸ್ತುಗಳ ನಿಯಂತ್ರಣ ಕಾಯಿದೆ (ಎನ್ಸಿಬಿ) ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.

Join Whatsapp
Exit mobile version