ಬೆಂಗಳೂರು: ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಶೇಖರಿಸಿಟ್ಟಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಬಂಧಿಸಿದೆ.
ನೈಜೀರಿಯಾ ಮೂಲದ ಲಿಯೋನಾರ್ಡ್ ಒಕ್ವುಡಿಲಿ (44) ಬಂಧಿತ ಆರೋಪಿ.
ಈತನಿಂದ 16 ಕೆ.ಜಿ ಮಾದಕ ಪದಾರ್ಥ, 500 ಗ್ರಾಂ ತೂಕದ ಕೊಕೇನ್ ಹಾಗೂ 1 ಮೊಬೈಲ್ ಹಾಗೂ ಇತರೆ ವಸ್ತುಗಳು ಸೇರಿ ಅಂದಾಜು 21 ಕೋಟಿ ರೂ. ಬೆಲೆ ಬಾಳುವ ಡ್ರಗ್ಸ್ ವಶಕ್ಕೆ ಪಡೆದಿದೆ.