ಮಣಿಪುರದಿಂದ ಸಾಗಿಸಲಾಗುತ್ತಿದ್ದ 5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

Prasthutha|

ಕರ್ಬಿ ಅಂಗ್ಲಾಂಗ್: ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತು ಪತ್ತೆಯಾಗಿದ್ದು, ಇದು ಮಣಿಪುರದಿಂದ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.  5 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಮತ್ತು ಓರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಖಚಿತ ಸುಳಿವಿನ ಮೇರೆಗೆ ಪೊಲೀಸರು ಲಾಹೋರಿಜನ್ ಔಟ್‌ಪೋಸ್ಟ್ ಪ್ರದೇಶದಲ್ಲಿ ವಾಹನವನ್ನು ತಡೆದು ಅಪಾರ ಪ್ರಮಾಣದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದು, ಮಣಿಪುರದಿಂದ ಬಂದ ಒಬ್ಬ ಪೆಡ್ಲರ್ ಅನ್ನು ಬಂಧಿಸಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜಿಬ್ ಕುಮಾರ್ ಸೈಕಿಯಾ ತಿಳಿಸಿದ್ದಾರೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)ಮಾನದಂಡಗಳ ಪ್ರಕಾರ ವಶಪಡಿಸಿಕೊಂಡ ಡ್ರಗ್ಸ್ ಒಟ್ಟು ಮೌಲ್ಯ ಸುಮಾರು 5.1 ಕೋಟಿ ರೂ. ಎಂದು ಅಸ್ಸಾಂ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಪೊಲೀಸ್ ಕಾರ್ಯಾಚರಣೆಯನ್ನು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶ್ಲಾಘಿಸಿದ್ದು, 637.28 ಗ್ರಾಂ. ಹೆರಾಯಿನ್ ಹೊಂದಿರುವ 50 ಸೋಪ್ ಬಾಕ್ಸ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Join Whatsapp