Home ಟಾಪ್ ಸುದ್ದಿಗಳು ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿ ಗುಪ್ತಾಂಗ ತೋರಿಸಿದ ಕುಡುಕ ಪ್ರಯಾಣಿಕ

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿ ಗುಪ್ತಾಂಗ ತೋರಿಸಿದ ಕುಡುಕ ಪ್ರಯಾಣಿಕ

ನವದೆಹಲಿ: ನ್ಯೂಯಾರ್ಕ್’ನಿಂದ ನವದೆಹಲಿಗೆ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಸಹ ಪ್ರಯಾಣಿಕ ಕಂಠಪೂರ್ತಿ ಕುಡಿದು ಮೂತ್ರ ವಿಸರ್ಜಿಸಿ ಗುಪ್ತಾಂಗ ತೋರಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನ್ಯೂಯಾರ್ಕ್ ನಿಂದ ದೆಹಲಿಗೆ ನ.26 ರಂದು  ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನ ಎI-102ದಲ್ಲಿ ಬ್ಯುಸಿನೆಸ್ ಕ್ಲಾಸ್’ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬರು ಕುಡಿದ ಮತ್ತಿನಲ್ಲಿ ಸಹಪ್ರಯಾಣಿಕರಾಗಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದಾರೆ.

ಈ ಬಗ್ಗೆ ಮಹಿಳೆ ಕೂಡಲೇ ಏರ್ ಇಂಡಿಯಾ ವಿಮಾನದಲ್ಲಿದ್ದ ಸಿಬ್ಬಂದಿಗೆ ತಿಳಿಸಿದ್ದಾರೆ. ಸಿಬ್ಬಂದಿ ಬಂದು ವಿಚಾರಿಸುತ್ತಿದ್ದಂತೆ ಕುಡಿದ ಮತ್ತಿನಲ್ಲಿ ಏನು ಅರಿಯದವರಂತೆ ವರ್ತಿಸಿದ್ದಾರೆ.

ಘಟನೆ ಬಳಿಕ ಮಹಿಳೆ ಈ ಬಗ್ಗೆ ಟಾಟಾ ಸನ್ಸ್ ಗ್ರೂಪ್’ನ ಮುಖ್ಯಸ್ಥ ನಟರಾಜನ್ ಚಂದ್ರಶೇಖರನ್ ಅವರಿಗೆ ಪತ್ರ ಬರೆದು ಘಟನೆ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ವಿಮಾನದ ಸಿಬ್ಬಂದಿ ಘಟನೆಯ ಬಳಿಕ ಈ ಬಗ್ಗೆ ಯಾವುದೇ ರೀತಿಯ ಸ್ಪಂದನೆ ಮಾಡಿಲ್ಲ. ಇದರಿಂದ ವಿಮಾನದಲ್ಲಿ ಸಂಚರಿಸುವಾಗ ನಮ್ಮ ಸುರಕ್ಷತೆ ಬಗ್ಗೆ ಪ್ರಶ್ನೆ ಮಾಡುವಂತಾಗಿದೆ.

ಊಟದ ಬಳಿಕ ವಿಮಾನದ ಲೈಟ್ ಆಫ್ ಮಾಡಲಾಗಿತ್ತು. ಈ ವೇಳೆ ಪ್ರಯಾಣಿಕರೊಬ್ಬರು ನನ್ನ ಸೀಟ್ ಬಳಿ ಬಂದು ಮೂತ್ರ ವಿಸರ್ಜಿಸಿ ಜನನಾಂಗವನ್ನು ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ಘಟನೆ ಬಗ್ಗೆ ಮಾಹಿತಿ ದೊರೆತಿದ್ದು, ಸೂಕ್ತ ತನಿಖೆ ನಡೆಸಿ ಅಸಭ್ಯವಾಗಿ ವರ್ತಿಸಿದ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದೆ.

Join Whatsapp
Exit mobile version