ದಾಸ, ದಾಸಯ್ಯ ಸಮುದಾಯದಿಂದ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯುವ ಯತ್ನಕ್ಕೆ ಆಕ್ಷೇಪ | ದಲಿತ ಮುಖಂಡರಿಂದ ಜಿಲ್ಲಾಧಿಕಾರಿಗೆ ಮನವಿ

Prasthutha|

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿಂದುಳಿದ ವರ್ಗಕ್ಕೆ ಸೇರಿದ ದಾಸ, ದಾಸಯ್ಯ ಸಮುದಾಯವು ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆಯಲು ಯತ್ನಿಸುತ್ತಿರುವುದನ್ನು ವಿರೋಧಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಸದಸ್ಯರು ದ.ಕ. ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿದರು.

ಸಂಘಟನೆಯ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ, ಜಿಲ್ಲಾ ಮಟ್ಟದ ದಲಿತ ಮುಖಂಡರ ಸಭೆ ನಡೆಸಿದ ಬಳಿಕ ಹಿಂದುಳಿದ ವರ್ಗಗಳ ದಾಸ, ದಾಸಯ್ಯ ಸಮುದಾಯಗಳಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

- Advertisement -

ಜಿಲ್ಲಾಧಿಕಾರಿಯವರನ್ನು ಭೇಟಿಯಾದ ನಿಯೋಗದಲ್ಲಿ ದಸಂಸ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್., ಒಕ್ಕೂಟದ ತಾಲೂಕು ಅಧ್ಯಕ್ಷ ಬಿ.ಕೆ. ವಸಂತ್, ಕಾರ್ಯದರ್ಶಿ ರಮೇಶ್ ಆರ್., ಕಾನೂನು ವಿಭಾಗದ ಮುಖ್ಯಸ್ಥ ಸಂಜೀವ ಆರ್., ಉಪಾಧ್ಯಕ್ಷ ಪ್ರಭಾಕರ ಶಾಂತಿಕೋಡಿ, ದಸಂಸ ಅಂಬೇಡ್ಕರ್ ವಾದ ಜಿಲ್ಲಾ ಪ್ರಧಾನ ಸಂಚಾಲಕ ಜಗದೀಶ್ ಪಾಂಡೇಶ್ವರ್, ಜಿಲ್ಲಾ ಸಂಘಟನಾ ಸಂಚಾಲಕ ಸದಾಶಿವ ಉರ್ವಾಸ್ಟೋರ್ ಉಪಸ್ಥಿತರಿದ್ದರು.

- Advertisement -