ಚಿಕ್ಕಬಳ್ಳಾಫುರ: ದಲಿತ ಸಂಘರ್ಷ ಸಮಿತಿ ಮುಖಂಡನನ್ನು ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಫುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭೈರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಾರಾಯಣಸ್ವಾಮಿ ಮೃತ ವ್ಯಕ್ತಿ. ಇವರು ಶಿಡ್ಲಘಟ್ಟ ನಗರದಿಂದ ಸ್ವಗ್ರಾಮಕ್ಕೆ ಹೋಗುತ್ತಿದ್ದಾಗ ಹತ್ಯೆ ಮಾಡಲಾಗಿದ್ದು, ಹಳೆ ದ್ವೇಷದ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ನಾರಾಯಣಸ್ವಾಮಿ ಹತ್ಯೆಯಾದ ಸ್ವಲ್ಪ ದೂರದಲ್ಲಿಯೇ ಅವರು ಚಲಿಸುತ್ತಿದ್ದ ಓಮಿನಿ ಕಾರು ರಸ್ತೆ ಬದಿ ನಿಂತಿದೆ.
ಮೃತ ವ್ಯಕ್ತಿ ರಿಯಲ್ ಎಸ್ಟೇಟ್ ಹಾಗೂ ದಲಿತ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಇದೀಗ ಸ್ಥಳಕ್ಕೆ ಚಿಕ್ಕಬಳ್ಳಾಫುರ ಎಸ್ಪಿ ಡಿ.ಎಲ್ ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.