ಬೆಳಗಾವಿ: ಓಮಾನ್ ದೇಶದ ಹೈಮಾ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ ಮತ್ತು ಆದಿಶೇಷ ಮೃತಪಟ್ಟವರಾಗಿದ್ದಾರೆ.
ಈ ನಾಲ್ವರು ಓಮಾನ್ ಗೆ ಪ್ರವಾಸಕ್ಕೆ ತೆರಳಿದ್ದರು. ಹೈಮಾ ಎಂಬ ಪ್ರದೇಶದಲ್ಲಿ ಹೋಗುತ್ತಿದ್ದ ವೇಳೆ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.
ಮೃತರ ಶವಗಳನ್ನು ಭಾರತಕ್ಕೆ ತರಲು ಅನುಕೂಲ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.