ಓಮಾನ್: ರಸ್ತೆ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸಾವು

Prasthutha|

ಬೆಳಗಾವಿ: ಓಮಾನ್​ ದೇಶದ ಹೈಮಾ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

- Advertisement -

ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ ಮತ್ತು ಆದಿಶೇಷ ಮೃತಪಟ್ಟವರಾಗಿದ್ದಾರೆ.

ಈ ನಾಲ್ವರು ಓಮಾನ್ ​ಗೆ ಪ್ರವಾಸಕ್ಕೆ ತೆರಳಿದ್ದರು. ಹೈಮಾ ಎಂಬ ಪ್ರದೇಶದಲ್ಲಿ ಹೋಗುತ್ತಿದ್ದ ವೇಳೆ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.

- Advertisement -

ಮೃತರ ಶವಗಳನ್ನು ಭಾರತಕ್ಕೆ ತರಲು ಅನುಕೂಲ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.



Join Whatsapp
Exit mobile version