ಪ್ರಧಾನಿ ಮೋದಿಯವರ ಹಠದಿಂದಾಗಿ, ಬಿಜೆಪಿಯೇತರ ರಾಜ್ಯಗಳಿಗೆ ಅನ್ಯಾಯ: ಮುಖ್ಯಮಂತ್ರಿ ಚಂದ್ರು

Prasthutha|

ವಿಜಯನಗರ: ಮೋದಿಯವರ ಹಠದಿಂದಾಗಿ ಬಿಜೆಪಿಯೇತರ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

- Advertisement -

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯ 25 ಸಂಸದರಿದ್ದರೂ ರಾಜ್ಯಕ್ಕೆ ಬರಬೇಕಿರುವ ಜಿಎಸ್‌ಟಿ ಪಾಲನ್ನು ಕೇಳುತ್ತಿಲ್ಲ. ಬರ ಪರಿಹಾರಕ್ಕೆ ಒತ್ತಾಯ ಮಾಡುತ್ತಿಲ್ಲ. ಬಿಜೆಪಿ ಸರ್ಕಾರವಿರುವ ರಾಜ್ಯಗಳಿಗೆ ಹಣ ನೀಡಲಾಗುತ್ತಿದೆ. ಬಿಜೆಪಿಯೇತರ ರಾಜ್ಯಗಳನ್ನು ಹತ್ತಿಕ್ಕುವ ಪ್ರಯತ್ನವಾಗುತ್ತಿದೆ . ಬೆಳಗಾವಿಯಲ್ಲಿ ಸದನ ಆರಂಭವಾಗಿ ಮೂರು ದಿನ ಕಳೆದರೂ ಹಿಂದುಳಿದ ಭಾಗಗಳ ಕುರಿತು ಚರ್ಚೆಯಾಗಿಲ್ಲ. ಶೇ 40ರಷ್ಟು ಭ್ರಷ್ಟಾಚಾರವನ್ನು ಮುಂದಿಟ್ಟುಕೊಂಡು, ಎಎಪಿಯ ಯೋಜನೆಗಳ್ನು ಕದ್ದು ಕಾಂಗ್ರೆಸ್ ಅಧಿಕಾರಕ್ಕೇರಿದೆ. ಅವರ ಗ್ಯಾರಂಟಿ ಯೋಜನೆಗಳು ಯಾರಿಗೂ ತಲುಪುತ್ತಿಲ್ಲ. ಏಳು ತಿಂಗಳೂ ಕಳೆದರೂ ಖಾತರಿಗಳನ್ನು ಸಂಪೂರ್ಣವಾಗಿ ಅನುಷ್ಠಾನಕ್ಕೆ ತರಲು ಸಾಧ್ಯವಾಗಿಲ್ಲ. ಬರದಿಂದಾಗಿ ರಾಜ್ಯದಲ್ಲಿ ಪರಿಸ್ಥಿತಿ ಹದಗೆಟ್ಟಿದ್ದರೂ, ಸರ್ಕಾರ ಆದ್ಯತೆಯ ಮೇರೆಗೆ ಪರಿಹಾರ ಕಂಡುಕೊಂಡಿಲ್ಲ ಎಂದು ದೂರಿದರು.

ರಾಜ್ಯದಲ್ಲಿ ಕಾಂಗ್ರೆಸ್‌ಗೆ ವಿರೋಧ ಪಕ್ಷವೇ ಇಲ್ಲ. ಸದನದಲ್ಲಿ ಬರ ಪರಿಸ್ಥಿತಿಯನ್ನು ಚರ್ಚೆಗೆ ತೆಗೆದುಕೊಳ್ಳಲು ಬಿಜೆಪಿ ನಾಯಕರೇ ಅವಕಾಶ ನೀಡಿಲ್ಲ. ಭ್ರಷ್ಟರಹಿತ ಸರ್ಕಾರ ನೀಡುತ್ತೇವೆ ಎಂದು ಮೋದಿ ಹೇಳುತ್ತಾರೆ. ಆದರೆ, ಅದೇ ಭ್ರಷ್ಟಾಚಾರದಿಂದಲೇ ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಿದರು. ಮಾಡಾಳ್ ವಿರೂಪಾಕ್ಷಪ್ಪ ಸಿಕ್ಕಿಬಿದ್ದರು. ಕುಟುಂಬ ರಾಜಕಾರಣದಿಂದ ದೇಶ ಅಭಿವೃದ್ಧಿಯಾಗಲ್ಲ ಎಂದು ಮೋದಿ ಹೇಳುತ್ತಾರೆ ಆದರೆ, ಯಡಿಯೂರಪ್ಪನವರ ಕುಟುಂಬ ರಾಜಕಾರಣಕ್ಕೆ ಅವಕಾಶ ನೀಡಲಾಗಿದೆ ಎಂದು ದೂರಿದರು.



Join Whatsapp
Exit mobile version