ಸುಪ್ರೀಂ ಕೋರ್ಟ್ ನ್ಯಾ. ಅರುಣ್ ಮಿಶ್ರಾ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಬಾರ್ ಅಸೋಸಿಯೇಶನ್ ಅಧ್ಯಕ್ಷ ದುಷ್ಯಂತ್ ದವೆಗೆ ಮಾತನಾಡಲು ನಿರಾಕರಣೆ!

Prasthutha|

ನವದೆಹಲಿ : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರುಣ್ ಮಿಶ್ರಾರ ಆನ್ ಲೈನ್ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ತಮಗೆ ಮಾತನಾಡಲು ಅವಕಾಶ ನೀಡಲಿಲ್ಲ. ಹೀಗಾಗಿ ತಾವು ಇನ್ನು ಮುಂದೆ ಸುಪ್ರೀಂ ಕೋರ್ಟ್ ನ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ ಅಧ್ಯಕ್ಷ, ಹಿರಿಯ ನ್ಯಾಯವಾದಿ ದುಷ್ಯಂತ್ ದವೆ ಹೇಳಿದ್ದಾರೆ.

ಸಿಜೆಐ ಎಸ್.ಎ. ಬೊಬ್ಡೆ ಅವರಿಗೆ ಪತ್ರ ಬರೆದಿರುವ ದವೆ, ತಮ್ಮ ಅವಧಿ ಡಿಸೆಂಬರ್ ನಲ್ಲಿ ಮುಗಿಯುವ ವರೆಗೂ, ಸುಪ್ರೀಂ ಕೋರ್ಟ್ ನ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ ವತಿಯಿಂದ ಮಾತನಾಡಲು ನನ್ನನ್ನು ತಡೆಯುವ ಎಲ್ಲ ಪ್ರಯತ್ನಗಳು ನಡೆದವು. ನನ್ನನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು ಮತ್ತು ಆಹ್ವಾನ ಸ್ವೀಕರಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.

- Advertisement -

ದವೆ ಅವರು ನ್ಯಾ. ಮಿಶ್ರಾರನ್ನು ಟೀಕಿಸುತ್ತಿದ್ದರು ಮತ್ತು ನ್ಯಾಯವಾದಿ ಪ್ರಶಾಂತ್ ಭೂಷಣ್ ಅವರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ, ಅವರನ್ನು ಬೆಂಬಲಿಸಿದ್ದರು.

- Advertisement -