ದಸರಾ ಹಬ್ಬ; ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಶಿಕ್ಷಣ ಇಲಾಖೆ

Prasthutha|

ಬೆಂಗಳೂರು: ದಸರಾ ಹಬ್ಬದ ರಜೆಯ ಘೋಷಣೆ ಆಗಿದ್ದು, ಪ್ರತಿ ಜಿಲ್ಲೆಗಳಿಗೂ ಸ್ಥಳೀಯವಾಗಿ ಗಮನಿಸಿ ದಸರಾ ರಜೆ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಮೈಸೂರು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 9 ರವರೆಗೆ ದಸರಾ ಹಬ್ಬದ ರಜೆ ಘೋಷಣೆ ಮಾಡಲಾಗಿದೆ. ಈ ರಜೆಯ ಮಧ್ಯೆ ನಡೆಯಲಿರುವ ಗಾಂಧಿ ಜಯಂತಿ ಮತ್ತು ವಾಲ್ಮೀಕಿ ಜಯಂತಿಯನ್ನು ಎಲ್ಲ ಶಾಲೆಗಳಲ್ಲೂ ಕಡ್ಡಾಯವಾಗಿ ಆಚರಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 10 ರವೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

- Advertisement -