Home ಟಾಪ್ ಸುದ್ದಿಗಳು ದಸರಾ ಹಬ್ಬ; ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಶಿಕ್ಷಣ ಇಲಾಖೆ

ದಸರಾ ಹಬ್ಬ; ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ದಸರಾ ಹಬ್ಬದ ರಜೆಯ ಘೋಷಣೆ ಆಗಿದ್ದು, ಪ್ರತಿ ಜಿಲ್ಲೆಗಳಿಗೂ ಸ್ಥಳೀಯವಾಗಿ ಗಮನಿಸಿ ದಸರಾ ರಜೆ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಮೈಸೂರು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 9 ರವರೆಗೆ ದಸರಾ ಹಬ್ಬದ ರಜೆ ಘೋಷಣೆ ಮಾಡಲಾಗಿದೆ. ಈ ರಜೆಯ ಮಧ್ಯೆ ನಡೆಯಲಿರುವ ಗಾಂಧಿ ಜಯಂತಿ ಮತ್ತು ವಾಲ್ಮೀಕಿ ಜಯಂತಿಯನ್ನು ಎಲ್ಲ ಶಾಲೆಗಳಲ್ಲೂ ಕಡ್ಡಾಯವಾಗಿ ಆಚರಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 10 ರವೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Join Whatsapp
Exit mobile version