Home ಟಾಪ್ ಸುದ್ದಿಗಳು ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಚಾಲನೆ: ಮಧುವಣಗಿತ್ತಿಯಂತೆ ಸಿಂಗಾರಗೊಂಡಿರುವ ಸಾಂಸ್ಕೃತಿಕ ನಗರಿ

ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಚಾಲನೆ: ಮಧುವಣಗಿತ್ತಿಯಂತೆ ಸಿಂಗಾರಗೊಂಡಿರುವ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಇಂದು ವಿಧ್ಯುಕ್ತವಾಗಿ ಚಾಲನೆ ನೀಡಿದರು.

ಕೋವಿಡ್‌ ಕಾರಣದಿಂದ ಈ ಬಾರಿಯೂ ಸರಳವಾಗಿ ಆಚರಿಸಲಾಗುತ್ತಿದೆ. ಸಾಂಸ್ಕೃತಿಕ ನಗರಿ ಮೈಸೂರು ನಗರ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.

ಎಸ್‌ಎಂ ಕೃಷ್ಣ ಇಂದು ಬೆಳಗ್ಗೆ 7.45ಕ್ಕೆ ಚಾಮುಂಡೇಶ್ವರಿ ದೇವಿಯ ದರ್ಶನ ಮಾಡಿ ಪೂಜೆ ಸಲ್ಲಿಸಿದರು. ಬೆಳಗ್ಗೆ 8.15 ರಿಂದ 8.45ರ ಮಧ್ಯೆ 2021ನೇ ಸಾಲಿನ ನಾಡಹಬ್ಬ ದಸರಾಗೆ ಅಧಿಕೃತವಾಗಿ ಚಾಲನೆ ದೊರೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸೇರಿದಂತೆ ಅನೇಕ ಗಣ್ಯರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಸಂಜೆ 6ಕ್ಕೆ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದ್ದು, ಇದೇ ವೇಳೆ ಸಂಗೀತ ವಿದ್ವಾನ್‌ ಪ್ರಶಸ್ತಿ ಪ್ರದಾನವೂ ನಡೆಯಲಿದೆ.

Join Whatsapp
Exit mobile version