ಬೆಂಗಳೂರು; ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭಗೊಂಡಿದ್ದು, ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ಅಭಿಮನ್ಯು ನೇತೃತ್ವದ ಗಜಪಡೆ ಅಶೋಕಪುರಂನಲ್ಲಿರುವ ಅರಣ್ಯ ಭವನದಲ್ಲಿ ಬೀಡುಬಿಟ್ಟಿವೆ.
ಒಟ್ಟು ಎಂಟು ಆನೆಗಳಿಗೆ ವಿಶೇಷ ಆರೈಕೆ ಮಾಡಲಾಗುತ್ತಿದ್ದು, ಗಜಪಡೆ ನಾಳೆ ಅರಮನೆ ಆವರಣ ಪ್ರವೇಶಿಸಲಿವೆ. ಬಳಿಕ ಆನೆಗಳಿಗೆ ಹಂತ ಹಂತವಾಗಿ ತಾಲೀಮು ನೀಡಲಾಗುವುದು.
ಕೊರೋನಾ ಸೋಂಕು ನಿಯಂತ್ರಿಸುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮಾವುತರಿಗೆ ಈಗಾಗಲೇ ಕೊರೋನಾ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ. ಮುಂದಿನ 15 ದಿನಗಳಲ್ಲಿ ಎರಡನೇ ಡೋಸ್ ಸಹ ನೀಡಲು ಸಹ ನಿರ್ಧರಿಸಲಾಗಿದೆ.
ಈ ಬಾರಿ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ 5 ಆನೆಗಳು ಆರೋಗ್ಯಕರವಾಗಿದ್ದು, ಗಂಡು ಮತ್ತು ಹೆಣ್ಣಾನೆಗಳಿಗೆ ಪ್ರತ್ಯೇಕವಾಗಿ ವಿಮೆ ಮಾಡಿಸಲಾಗಿದೆ. ಮಾವುತರು ಹಾಗೂ ಕಾವಾಡಿಗರಿಗೂ ವಿಮೆ ಮಾಡಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.