Home ಟಾಪ್ ಸುದ್ದಿಗಳು ಬಿಜೆಪಿ- ಜೆಡಿಎಸ್ ಮೈತ್ರಿ: ಡಿವಿ ಸದಾನಂದ ಗೌಡ ವಿರೋಧ

ಬಿಜೆಪಿ- ಜೆಡಿಎಸ್ ಮೈತ್ರಿ: ಡಿವಿ ಸದಾನಂದ ಗೌಡ ವಿರೋಧ

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಜೆಡಿಎಸ್ ಹಾಗೂ ಬಿಜೆಪಿಯಲ್ಲಿ ಕೆಲವು ನಾಯಕರ ವಿರೋಧಗಳು ವ್ಯಕ್ತವಾಗುತ್ತಿದೆ. ಅದರಲ್ಲೂ ಮಾಜಿ ಸಿಎಂ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ವಿರೋಧ ವ್ಯಕ್ತಪಡಿಸಿದ್ದಾರೆ.


ಇದೇ ವಿಚಾರವಾಗಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಆದರೆ ಈ ಬಗ್ಗೆ ಕರ್ನಾಟಕದ ಯಾವುದೇ ಬಿಜೆಪಿ ನಾಯಕರ ಜೊತೆಗೂ ಹೈಕಮಾಂಡ್ ವರಿಷ್ಠರು ಚರ್ಚೆ ಮಾಡಿಲ್ಲ. ನಮ್ಮನ್ನು ಹೊರಗಿಟ್ಟು ಕೇಂದ್ರದ ನಾಯಕರೇ ಈ ತೀರ್ಮಾನವನ್ನು ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version