ಮುಂದೆ ಉಪ ಮುಖಮಂತ್ರಿ ಮನೀಶ್ ಸಿಸೋಡಿಯಾ ಬಂಧನ ಸಾಧ್ಯತೆ: ಅರವಿಂದ್ ಕೇಜ್ರಿವಾಲ್ ಆರೋಪ

Prasthutha|

ನವದೆಹಲಿ: ಸತ್ಯೇಂದ್ರ ಜೈನ್ ಬಂಧನದ ಬೆನ್ನಲ್ಲೇ ಮುಂದೆ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ.

- Advertisement -

ಈ ಕುರಿತು ಪ್ರತಿಕ್ರಿಯಿಸಿರುವ ಅವರು ಭಷ್ಟಾಚಾರ ಆರೋಪದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. ಸದ್ಯ ಅವರ ವಿರುದ್ಧ ಸುಳ್ಳು ಪ್ರಕರಣವನ್ನು ದಾಖಲಿಸುವಂತೆ ಕೇಂದ್ರ ಏಜೆನ್ಸಿಗಳಿಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಸೋಮವಾರ ಬಂಧನಕ್ಕೊಳಗಾಗಿದ್ದ ಸಚಿವ ಸತ್ಯೇಂದ್ರ ಜೈನ್ ಅವರ ಬಂಧನದ ಕುರಿತು ಜನವರಿಯಲ್ಲಿ ಇದೇ ರೀತಿಯಲ್ಲಿ ಕೇಜ್ರಿವಾಲ್ ಭವಿಷ್ಯ ನುಡಿದಿದ್ದರು.

Join Whatsapp