ನವದೆಹಲಿ: ಜಾರಿ ನಿರ್ದೇಶನಾಲಯ (ಇ.ಡಿ) ಅತ್ಯಂತ ನಿರ್ದಯಿಯಂತೆ ವರ್ತಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.
ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಇ.ಡಿ ಇತ್ತೀಚೆಗೆ ಸಲ್ಲಿಸಿದ ಪ್ರಮಾಣಪತ್ರಕ್ಕೆ ಪ್ರತ್ಯುತ್ತರ ನೀಡಿರುವ ಅವರು, ತಾನು ತನಿಖೆಗೆ ಸದಾ ಸಹಕರಿಸಿರುವುದಾಗಿಯೂ ಹೇಳಿದ್ದಾರೆ.
ಒಂಬತ್ತು ಬಾರಿ ಸಮನ್ಸ್ ನೀಡಿದ್ದರೂ ತನಿಖಾಧಿಕಾರಿ ಮುಂದೆ ಹಾಜರಾಗದಿರುವುದು ಬಂಧನಕ್ಕೆ ಪ್ರಮುಖ ಕಾರಣ ಎಂದು ಇ.ಡಿ. ಪ್ರಮಾಣಪತ್ರದಲ್ಲಿ ಹೇಳಿತ್ತು.
ಇ.ಡಿ.ಯ ಪ್ರತಿ ಸಮನ್ಸ್‌ಗೆ ಸರಿಯಾಗಿ ಪ್ರತಿಕ್ರಿಯೆ ನೀಡಲಾಗಿದೆ. ಬರವಣಿ ಮೂಲಕ ಅಥವಾ ವರ್ಚುವಲ್ ಆಗಿ ಪ್ರತಿಕ್ರಿಯಿಸಲು ಅಥವಾ ಹಾಜರಾಗಲು ಅವಕಾಶಗಳು ಇರುವಾಗ ಭೌತಿಕ ಉಪಸ್ಥಿತಿಯನ್ನೇ ಬೇಡುವುದು ಎಷ್ಟು ಸರಿ ಎಂದು ಕೇಜ್ರಿವಾಲ್ ಪ್ರಶ್ನಿಸಿದ ಅವರು, ತಮ್ಮ ಮನವಿ ಪರಿಗಣನೆಗೆ ಅರ್ಹವಾಗಿದ್ದು, ತಕ್ಷಣವೇ ಬಿಡುಗಡೆ ಮಾಡುವಂತೆ ಕೋರಿದ್ದಾರೆ.