ಪಡಿತರ ಚೀಟಿದಾರರ ಇ – ಕೆವೈಸಿಗೆ ಸೆ .1 ರಿಂದ 10 ರವರೆಗೆ ಮಾತ್ರ ಅವಕಾಶ: ದ.ಕ ಜಿಲ್ಲಾಧಿಕಾರಿ

Prasthutha|

ಮಂಗಳೂರು: ಸೆ .1 ರಿಂದ 10 ರವರೆಗೆ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಾಕಿ ಉಳಿದಿರುವ ಇ – ಕೆವೈಸಿ ನಡೆಸಲಾಗುತ್ತಿದ್ದು, ಇದು ಕೊನೆಯ ಅವಕಾಶವಾಗಿದೆ, ನಂತರ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರ ತಡೆಹಿಡಿಯಲಾಗುವುದು ಎಂದು ಜಿಲ್ಲಾಧಿಕಾರಿ ಡಾ . ಕೆ.ವಿ.ರಾಜೇಂದ್ರ ಹೇಳಿದ್ದಾರೆ.

- Advertisement -


ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲ ಸದಸ್ಯರ ಇ- ಕೆವೈಸಿ ನೀಡಬೇಕು. ಜಿಲ್ಲೆಯಲ್ಲಿ ಚಾಲ್ತಿ ಇರುವ ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ – ಕೆವೈಸಿ ನೀಡಲು ಆಧಾರ್ ಕಾರ್ಡ್, ಎಲ್ಪಿಜಿ ದಾಖಲೆ , ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ , ಎಂಡೋಸಲ್ಫಾನ್ ಪೀಡಿತರಂತಹ ವಿಶೇಷ ವರ್ಗದವರು ಹೊಂದಿರುವ ದೃಢಪತ್ರಗಳಿದ್ದಲ್ಲಿ ಅವುಗಳೊಂದಿಗೆ ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಇ – ಕೆವೈಸಿ ಮಾಡಿಸಬೇಕು.


ಇ-ಕೆವೈಸಿ ನೀಡಲು ಯಾವುದೇ ಶುಲ್ಕವಿಲ್ಲ. ಇದನ್ನು ಉಚಿತವಾಗಿ ಮಾಡಲಾಗುತ್ತಿದೆ ಎಂದು ಪ್ರಕಟನೆ ತಿಳಿಸಿದೆ.

Join Whatsapp