Home ಮಾಹಿತಿ ಇ-ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್‌ ಕಾರ್ಡ್‌ ವಿತರಣೆ ಆರಂಭ

ಇ-ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್‌ ಕಾರ್ಡ್‌ ವಿತರಣೆ ಆರಂಭ

ಶ್ರಮ್‌ ಕಾರ್ಡ್‌ ಪಡೆದಿರುವ ಅಸಂಘಟಿತ ಕಾರ್ಮಿಕರು ಹೊಸದಾಗಿ ಪಡಿತರ ಚೀಟಿ ಪಡೆಯಲು ಸುವಣಣಾವಕಾಶ ಒದಗಿ ಬಂದಿದೆ. ಇವರ ಪೈಕಿ ಅರ್ಹರ ಪಟ್ಟಿಯನ್ನು ಕಾರ್ಮಿಕ ಇಲಾಖೆಯು ಆಹಾರ ಇಲಾಖೆಗೆ ರವಾನಿಸಿದೆ.

ಇ – ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿಪಿಎಲ್‌) ನೀಡಬೇಕೆಂಬ ಸುಪ್ರೀಂಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಅರ್ಹ ಇ- ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ – ಶ್ರಮ್‌ ನೋಂದಾಯಿತ ಎಲ್ಲಾಅರ್ಹ ಕಾರ್ಮಿಕರು ಸಮೀಪದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಟೋಲ್‌ ಫ್ರೀ ದೂರವಾಣಿ: 1800-425-9339 ಅಥವಾ ಸಹಾಯವಾಣಿ 1967ಕ್ಕೆ ಬೆಳಗ್ಗೆ 10ರಿಂದ ಸಂಜೆ 5.30ರ ನಡುವೆ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version