ಕೊಪ್ಪಳ: ಕಾಂಗ್ರೆಸ್‌ನ ಗೃಹಲಕ್ಷ್ಮೀ ಘೋಷಣೆಗೆ ಸಡ್ಡು ಹೊಡೆದಿರುವ ಜನಾರ್ದನ ರೆಡ್ಡಿ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 2,500 ರೂ. ಆರ್ಥಿಕ ನೆರವು ನೀಡುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿದ್ದಾರೆ.
ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (KRPP) ಸ್ಥಾಪಕ ಜನಾರ್ದನ ರೆಡ್ಡಿ ಕೊಪ್ಪಳದ ಕನಕಗಿರಿಯಲ್ಲಿ ಬುಧವಾರ ‘ಚೆನ್ನಮ್ಮ ಅಭಯಹಸ್ತ’ ಎಂಬ ಹೆಸರಿನಲ್ಲಿ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿ ಪ್ರತಿ ಕುಟುಂಬಕ್ಕೆ 2,500 ರೂ. ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ.
ಸ್ತ್ರೀ ಶಕ್ತಿ ಗುಂಪಿಗೆ ಬಡ್ಡಿ ರಹಿತ 10 ಲಕ್ಷ ರೂ. ಸಾಲ ನಿಡಲಾಗುವುದು ಎಂದೂ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಮಹಿಳೆಯರಿಗೆ ಉಚಿತ ಪ್ರಯಾಣ, ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ಸಾವಿರ ವೇತನ ಹೆಚ್ಚಳ ಸೇರಿದಂತೆ ಅನೇಕ ಭರವಸೆಗಳನ್ನು ನೀಡಲಾಗಿದೆ.