ಇಳಂತಿಲ ದಾಳಿ| ಆರೋಪಿಗಳ ಶೀಘ್ರ ಬಂಧನಕ್ಕೆ ಎಸ್.ಡಿ ಪಿ.ಐ ನಿಯೋಗದಿಂದ ಉಪ್ಪಿನಂಗಡಿ ಠಾಣೆಗೆ ಮನವಿ

Prasthutha: December 7, 2021

ಉಪ್ಪಿನಂಗಡಿ: ಇಳಂತಿಲದಲ್ಲಿ ಐವರ ಮೇಲೆ ನಡೆದ ಮಾರಣಾಂತಿಕ ದಾಳಿ ನಡೆಸಿದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಎಸ್‌ಡಿಪಿಐ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದೆ.

ಎಸ್‌ಡಿಪಿಐ ನಿಯೋಗವು ಆರಕ್ಷಕ ಅಧಿಕಾರಿಗಳನ್ನು ಭೇಟಿ ಮಾಡಿ ಸಂಘಪರಿವಾರದಿಂದ ನಿರಂತರವಾಗಿ ನಡೆಯುತ್ತಿರುವ ದಾಳಿಗಳಿಂದ ಮತ್ತು ಪೋಲಿಸ್ ಇಲಾಖೆ ಈ ಮೊದಲು ನೀಡಿದ ದೂರುಗಳನ್ನು ನಿರ್ಲಕ್ಷಿಸಿದ್ದೇ ಇಂತಹ ಘಟನೆಗಳು ಪುನರಾವರ್ತನೆಯಾಗಲು ಕಾರಣವಾಗಿದೆ. ಆದ್ದರಿಂದ ಈ ಪೂರ್ವನಿಯೋಜಿತ ದಾಳಿಯ ಹಿಂದಿನ ರೂವಾರಿಗಳೊಂದಿಗೆ ದಾಳಿ ಮಾಡಿದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದೆ.

ನಿಯೋಗದಲ್ಲಿ ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಇಬ್ರಾಹಿಂ ಸಾಗರ್ ಮತ್ತು ಸದಸ್ಯರು , ಎಸ್ ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ನಿಸಾರ್ ಕುದ್ರಡ್ಕ ಮತ್ತು ಸದಸ್ಯರು ಉಪ್ಪಿನಂಗಡಿ ಬ್ಲಾಕ್ ಸಮಿತಿಯ ಅಧ್ಯಕ್ಷರಾದ ಮುಸ್ತಫ ಲತೀಫಿ ಮತ್ತು ಸದಸ್ಯರು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ಜಿಲ್ಲಾ ಸಮಿತಿ ಅಧ್ಯಕ್ಷರಾದ ಅಬ್ದುಲ್ ಹಮೀದ್ ಮೆಜೆಸ್ಟಿಕ್, ಇಳಂತಿಲ ಬ್ಲಾಕ್ ಸಮಿತಿ ಅಧ್ಯಕ್ಷರಾದ ಹಮೀದ್ , ಉಪ್ಪಿನಂಗಡಿ ಗ್ರಾಮ ಸಮಿತಿ ಸದಸ್ಯರಾದ ರಶೀದ್ ಮಠ, ಎಸ್.ಡಿ.ಪಿ.ಐ ಉಪ್ಪಿನಂಗಡಿ ಗ್ರಾಮ ಸಮಿತಿ ಅಧ್ಯಕ್ಷರಾದ ಅಝೀಝ್ ನಿನ್ನಿಕಲ್ಲ್, ಎಸ್.ಡಿ.ಪಿ.ಐ ನೆಕ್ಕಿಲಾಡಿ ಗ್ರಾಮ ಸಮಿತಿಯ ಅಧ್ಯಕ್ಷರಾದ ಝಕರಿಯಾ ಕೊಡಿಪ್ಪಾಡಿ ಇದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!