ಉಪ್ಪಿನಂಗಡಿ: ಇಳಂತಿಲದಲ್ಲಿ ಐವರ ಮೇಲೆ ನಡೆದ ಮಾರಣಾಂತಿಕ ದಾಳಿ ನಡೆಸಿದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಎಸ್‌ಡಿಪಿಐ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದೆ.
ಎಸ್‌ಡಿಪಿಐ ನಿಯೋಗವು ಆರಕ್ಷಕ ಅಧಿಕಾರಿಗಳನ್ನು ಭೇಟಿ ಮಾಡಿ ಸಂಘಪರಿವಾರದಿಂದ ನಿರಂತರವಾಗಿ ನಡೆಯುತ್ತಿರುವ ದಾಳಿಗಳಿಂದ ಮತ್ತು ಪೋಲಿಸ್ ಇಲಾಖೆ ಈ ಮೊದಲು ನೀಡಿದ ದೂರುಗಳನ್ನು ನಿರ್ಲಕ್ಷಿಸಿದ್ದೇ ಇಂತಹ ಘಟನೆಗಳು ಪುನರಾವರ್ತನೆಯಾಗಲು ಕಾರಣವಾಗಿದೆ. ಆದ್ದರಿಂದ ಈ ಪೂರ್ವನಿಯೋಜಿತ ದಾಳಿಯ ಹಿಂದಿನ ರೂವಾರಿಗಳೊಂದಿಗೆ ದಾಳಿ ಮಾಡಿದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದೆ.
ನಿಯೋಗದಲ್ಲಿ ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಇಬ್ರಾಹಿಂ ಸಾಗರ್ ಮತ್ತು ಸದಸ್ಯರು , ಎಸ್ ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ನಿಸಾರ್ ಕುದ್ರಡ್ಕ ಮತ್ತು ಸದಸ್ಯರು ಉಪ್ಪಿನಂಗಡಿ ಬ್ಲಾಕ್ ಸಮಿತಿಯ ಅಧ್ಯಕ್ಷರಾದ ಮುಸ್ತಫ ಲತೀಫಿ ಮತ್ತು ಸದಸ್ಯರು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ಜಿಲ್ಲಾ ಸಮಿತಿ ಅಧ್ಯಕ್ಷರಾದ ಅಬ್ದುಲ್ ಹಮೀದ್ ಮೆಜೆಸ್ಟಿಕ್, ಇಳಂತಿಲ ಬ್ಲಾಕ್ ಸಮಿತಿ ಅಧ್ಯಕ್ಷರಾದ ಹಮೀದ್ , ಉಪ್ಪಿನಂಗಡಿ ಗ್ರಾಮ ಸಮಿತಿ ಸದಸ್ಯರಾದ ರಶೀದ್ ಮಠ, ಎಸ್.ಡಿ.ಪಿ.ಐ ಉಪ್ಪಿನಂಗಡಿ ಗ್ರಾಮ ಸಮಿತಿ ಅಧ್ಯಕ್ಷರಾದ ಅಝೀಝ್ ನಿನ್ನಿಕಲ್ಲ್, ಎಸ್.ಡಿ.ಪಿ.ಐ ನೆಕ್ಕಿಲಾಡಿ ಗ್ರಾಮ ಸಮಿತಿಯ ಅಧ್ಯಕ್ಷರಾದ ಝಕರಿಯಾ ಕೊಡಿಪ್ಪಾಡಿ ಇದ್ದರು.