ಖಾಯಂ ಪೌರಕಾರ್ಮಿಕರಿಗೆ ಶೀಘ್ರ ಮನೆ ನಿರ್ಮಾಣ: ಡಾ.ಬಿ.ಸಿ.ಸತೀಶ

Prasthutha|

ಮಡಿಕೇರಿ: ಖಾಯಂ ಪೌರ ಕಾರ್ಮಿಕರಿಗೆ ಇದೇ ವರ್ಷದಲ್ಲಿ 12 ಮನೆಗಳನ್ನು ನಿರ್ಮಿಸಿ ಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಭರವಸೆ ನೀಡಿದ್ದಾರೆ.

- Advertisement -

ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಪೌರ ಕಾರ್ಮಿಕರಿಗೆ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ‘ಹೈಜಿನ್ ಕಿಟ್’ ವಿತರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮನೆ ಇಲ್ಲದ ಖಾಯಂ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಮನೆ ನಿರ್ಮಾಣ ಮಾಡಬೇಕಿದೆ. ಆ ನಿಟ್ಟಿನಲ್ಲಿ ಈಗಾಗಲೇ ಗುರುತಿಸಿರುವ ಜಾಗದಲ್ಲಿ ಮನೆ ನಿರ್ಮಿಸಿಕೊಡಲಾಗುವುದು ಎಂದು ಹೇಳಿದರು.

ನಗರ/ಪಟ್ಟಣಗಳ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಕಾರ್ಯ ಮಹತ್ತರವಾದುದು. ಪೌರ ಕಾರ್ಮಿಕರು ನಗರದ ಸ್ವಚ್ಛತೆ ಜೊತೆಗೆ, ತಮ್ಮ ಆರೋಗ್ಯದ ಕಡೆಯು ಗಮನಹರಿಸಬೇಕು. 15 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ನಿಯಂತ್ರಣ ಲಸಿಕೆ ಪಡೆಯಬೇಕು. ಯಾರೂ ಕೋವಿಡ್ ನಿಯಂತ್ರಣ ಲಸಿಕೆಯಿಂದ ದೂರವಿರಬಾರದು ಎಂದರು. ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ನಗರಸಭೆ ಪೌರಾಯುಕ್ತ ಎಸ್.ವಿ.ರಾಮದಾಸ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮುರಳೀಧರ, ಯುವ ರೆಡ್ ಕ್ರಾಸ್ ಜಿಲ್ಲಾ ಸಂಚಾಲಕರಾದ ಎಂ.ಧನಂಜಯ, ಪರಿಸರ ಎಂಜಿನಿಯರ್ ಸೌಮ್ಯ, ಇತರರು ಇದ್ದರು.

Join Whatsapp