Home ಟಾಪ್ ಸುದ್ದಿಗಳು ಕೋವಿಡ್ ನಿಯಮಾವಳಿ ಸರಳಗೊಳಿಸುವ ಬಗ್ಗೆ ಶೀಘ್ರ ತೀರ್ಮಾನ: ಮುಖ್ಯಮಂತ್ರಿ ಬೊಮ್ಮಾಯಿ

ಕೋವಿಡ್ ನಿಯಮಾವಳಿ ಸರಳಗೊಳಿಸುವ ಬಗ್ಗೆ ಶೀಘ್ರ ತೀರ್ಮಾನ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು : ಕೋವಿಡ್ ನಿಯಮಾವಳಿಗಳನ್ನು ಸರಳಗೊಳಿಸುವ ನಿಟ್ಟಿನಲ್ಲಿ ಒಂದೆರಡು ದಿನಗಳಲ್ಲಿ ತಜ್ಞರ ಸಮಿತಿ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ಪ್ರದೇಶಗಳಲ್ಲಿ ಸಂಚಾರ ಮೇಲಿನ ನಿರ್ಬಂಧ ತೆರವು, ಶಾಲೆಗಳ ಪುನರಾರಂಭ ಸೇರಿದಂತೆ ಎಲ್ಲವನ್ನೂ ಸಮಗ್ರವಾಗಿ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು. ಮುಂದಿನ ವರ್ಷ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದರು.


ಮೈಸೂರಿನ ವಸ್ತುಪ್ರದರ್ಶನವನ್ನು ವರ್ಷವಿಡೀ ಉಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಶಾಶ್ವತ ವಸ್ತುಪ್ರದರ್ಶನ ಆಯೋಜಿಸುವ ಬಗ್ಗೆ ಯೋಜನೆ ರೂಪಿಸಲಾಗುವುದು. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಸರ್ಕಿಟ್ ರೂಪಿಸಲು ಚಿಂತನೆ ನಡೆದಿದ್ದು, ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

Join Whatsapp
Exit mobile version