ರಾಜ್ಯದಲ್ಲಿ ಬೆಳ್ಳಂಬೆಳಗ್ಗೆಯೇ ಭೀಕರ ಅಪಘಾತ: ವ್ಯಾನ್​ನಲ್ಲಿಯೇ ಕೊನೆಯುಸಿರೆಳೆದ 12 ಮಂದಿ

Prasthutha|

- Advertisement -

ಚಿಕ್ಕಬಳ್ಳಾಪುರ: ಬೆಳ್ಳಂಬೆಳಗ್ಗೆಯೇ ಚಿಕ್ಕಬಳ್ಳಾಪುರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರ ಚಿತ್ರಾವತಿ ಬಳಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ 12 ಜನರು ಸಾವನ್ನಪ್ಪಿದ್ದಾರೆ.

ನಿಂತಿದ್ದ ಸಿಮೆಂಟ್ ಬಲ್ಕರ್ ಗೆ ಟಾಟಾ ಸುಮೋ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಟಾಟಾ ಸುಮೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾವಿಗೀಡಾದವರೆಲ್ಲ ಟಾಟಾ ಸುಮದಲ್ಲಿರುವವರು ಎಂದು ತಿಳಿದು ಬಂದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ದಟ್ಟ ಮಂಜು ಆವರಿಸಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಟಾಟಾ ಸುಮೋದಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಎಲ್ಲರೂ ಸಾವಿಗೀಡಾಗಿದ್ದಾರೆ.

- Advertisement -

ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.

ಮೃತರ ವಿವರ ಇನ್ನೂ ಪತ್ತೆಯಾಗಿಲ್ಲ. ಆಂಧ್ರ ಪ್ರದೇಶದಿಂದ ಬೆಂಗಳೂರಿನತ್ತ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.