Home ಟಾಪ್ ಸುದ್ದಿಗಳು ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ

ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ

ಮಡಿಕೇರಿ: ಕೊಡಗಿನ ಗಡಿಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದೆ. ಇಂದು ಸಂಜೆ 4ಗಂಟೆ ಯ ಹೊತ್ತಿಗೆ ಮತ್ತೆ ಭೂಮಿ ಕಂಪಿಸಿರುವುದಾಗಿ ತಿಳಿದುಬಂದಿದೆ.

ಪೆರಾಜೆ, ಅರಂತೋಡು, ಮರ್ಕಂಜ, ಪೆರಾಜೆ, ಚೆಂಬು, ತೊಡಿಕಾನ, ಉಬರಡ್ಕ ಮತ್ತಿತರ ಪ್ರದೇಶಗಳಲ್ಲಿ ಕಂಪನ ಆಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಕೆಲವವೆಡೆ ಲಘು ಕಂಪನ ಅನುಭವವಾಗಿದ್ದು, ಅನೇಕ ಕಡೆ ದೊಡ್ಡ ಶಬ್ದದ ಅರಿವಾಗಿದೆ ಎನ್ನಲಾಗಿದೆ.

ನಿನ್ನೆಯೂ ಇದೇ ಭಾಗದಲ್ಲಿ 1.8 ತೀವ್ರತೆಯ  ಲಘು ಕಂಪನವಾಗಿತ್ತು ಎಂದು ತಿಳಿದು ಬಂದಿದೆ.

ಈ ಮಧ್ಯೆ ನಾಳೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

Join Whatsapp
Exit mobile version