ಕೊಡಗಿನಲ್ಲಿ ಮತ್ತೆ ಭೂಕಂಪನದ ಅನುಭವ

Prasthutha|

ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಮತ್ತೆ ಭೂ ಕಂಪನದ ಅನುಭವವಾಗಿದ್ದು, ಸುಮಾರು 3 ರಿಂದ 4 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ಇನ್ನೂ ಕಂಪನದಿಂದ ಮನೆಯಲ್ಲಿದ್ದ ಪಾತ್ರೆಗಳು
ಅಲುಗಾಡಿದ್ದು, ಮಡಿಕೇರಿ ತಾಲೂಕಿನ ಚೆಂಬು, ಕರಿಕೆ ಸಂಪಾಜೆ ವ್ಯಾಪ್ತಿಯಲ್ಲಿ ಕಂಪನದ ಅನುಭವ ಉಂಟಾಗಿದ್ದು, ಬೆಳಗ್ಗೆ 9.10 ಕ್ಕೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ.
ಕೊಡಗು ಗಡಿಗೆ ಹೊಂದಿಕೊಂಡಿರುವ ದ.ಕ ಜಿಲ್ಲೆಯ ಕಲ್ಲುಗುಂಡಿ, ಗೂನಡ್ಕ ಭಾಗದಲ್ಲೂ ಕಂಪನದ ಅನುಭವವಾಗಿದೆ.ಇದರಿಂದ ಕೊಡಗು-ದ.ಕ ಗಡಿ ಭಾಗದ ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ. ಇನ್ನೂ ಭೂಮಿಯೊಳಗಿನಿಂದ ವಿಚಿತ್ರ ಶಬ್ಧ ಕೇಳಿರುವುದಾಗಿ ಜನರ ಹೇಳುತ್ತಿದ್ದಾರೆ.

Join Whatsapp