ವಿಜಯಪುರ: ಇಂದು ಬೆಳ್ಳಂಬೆಳಗ್ಗೆ ಗುಮ್ಮಟನಗರಿ ವಿಜಯಪುರ ಜಿಲ್ಲೆಯಾದ್ಯಂತ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. 3 ರಿಂದ 4 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದೆ.
ಬೆಳಗ್ಗೆ 6.22ರ ಸಮಯದಲ್ಲಿ 3 ರಿಂದ 4 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದೆ. ಇದಕ್ಕೂ ಮುನ್ನ 5-40ರ ವೇಳೆಯಲ್ಲೂ ಸ್ವಲ್ಪ ಪ್ರಮಾಣದಲ್ಲಿ ಭೂಕಂಪನವಾಗಿದೆ. ಕಳೆದ ರಾತ್ರಿಯಿಂದ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ಈ ನಡುವೆ ಭೂಕಂಪನವಾಗಿದೆ. ವಿಜಯಪುರದ ನಗರದ ರೇಲ್ವೆ ನಿಲ್ದಾಣ ಪ್ರದೇಶ, ಗೋಳಗುಮ್ಮಟ ಪ್ರದೇಶ, ಗ್ಯಾಂಗಬಾವಡಿ, ಆಶ್ರಮ ಕಾಲೋನಿ, ಫಾರೇಖನಗರ ಸೇರಿದಂತೆ ಹಲವು ಕಡೆಗಳಲ್ಲಿ ಭೂಮಿ ಕಂಪಿಸಿದೆ.
ಇತ್ತೀಚಿನ ವರ್ಷಗಳಲ್ಲಿ ಇಷ್ಟೊಂದು ಶಬ್ದದೊಂದಿಗೆ ಭೂಕಂಪನ ಆಗಿರಲಿಲ್ಲ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.