ವಿಜಯಪುರ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ್ದು, ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಇಂದು(ಮಂಗಳವಾರ) ಬೆಳಿಗ್ಗೆ 11-29 ನಿಮಿಷಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ.
ಜೋರಾದ ಶಬ್ಧದೊಂದಿಗೆ ಭೂಮಿ ಕಂಪಿಸಿದೆ. ಜೋರು ಶಬ್ದಕ್ಕೆ ಅಡುಗೆ ಮನೆಯಲ್ಲಿನ ಪಾತ್ರೆ, ಪಗಡೆಗಳು ಬಿದ್ದಿವೆ. ತಿಕೋಟ ತಲೂಕಿನ ಟಕ್ಕಳಕಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಕಳ್ಳಕವಟಗಿ, ಘೋಣಸಗಿ, ಹುಬನೂರ ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದೆ.
ಗಡಿ ಭಾಗದ ಮಹಾರಾಷ್ಟ್ರದ ಮೊರಬಗಿ, ತಿಕ್ಕುಂಡಿ, ಆಸಂಗಿಯಲ್ಲೂ ಭೂಮಿ ನಡುಗಿದ ಅನುಭವವಾಗಿದೆ. ಜೋರು ಶಬ್ದಕ್ಕೆ ಜನರು ಮನೆಯಿಂದ ಹೊರಗಡೆ ಒಡೋಡಿ ಬಂದಿದ್ದಾರೆ.