ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಲಡಾಖ್ ನಲ್ಲಿ ಇಂದು (ಬುಧವಾರ) ಬೆಳಿಗ್ಗೆ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ.
- Advertisement -
ರಿಕ್ಟರ್ ಮಾಪಕದಲ್ಲಿ 4.4ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್ ಸಿಎಸ್) ತಿಳಿಸಿದೆ.
ಭೂಕಂಪನದ ಕೇಂದ್ರ ಬಿಂದು ಲೇಹ್ ಆಗಿದ್ದು, 150 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿಸಿದೆ. ಇಂದು ಬೆಳಿಗ್ಗೆ ಸುಮಾರು 8 ಗಂಟೆ ಹೊತ್ತಿಗೆ ಭೂಕಂಪ ಸಂಭವಿಸಿದೆ.